ಮೈಸೂರು: ಕೆ.ಆರ್.ನಗರ ತಾಲೂಕಿನ ಎಡತೊರೆ ಗ್ರಾಮದ ಪುರಾತನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಗೋಡೆ ಮೇಲೆ ಶಿಲುಬೆ ಹಾಗೂ ಮಸೀದಿಯ ಚಿತ್ರಗಳನ್ನು ಬಿಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಸ್ಥಳೀಯರ ವಿರೋಧದ ಬೆನ್ನಲ್ಲೇ ತಹಶೀಲ್ದಾರ್ ಸುರೇಂದ್ರ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಚಿತ್ರಗಳನ್ನು ತೆರವುಗೊಳಿಸಿದ್ದಾರೆ. ದೇವಾಲಯದ ಪಾರುಪತ್ತೇದಾರ್ ಆರತಿ ಹಾಗೂ ಕಲಾವಿದ ವಿನಯ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಘಟನೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆ.ಆರ್.ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
