ವಿಜಯಪುರ: ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ತೊಗರಿ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆದಿದ್ದ 1.1 ಕೋಟಿ ರೂ. ಮೌಲ್ಯದ 200 ಕೆ.ಜಿ.ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಶಿವಶಂಕರ್ ಶರಣಪ್ಪ ಜೀರ್ ತನ್ನ ಜಮೀನಿನಲ್ಲಿ 500ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿದ್ದನು. ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ. ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಬಹುಮಾನ ಘೋಷಿಸಿದ್ದು, ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
