Breaking News

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ

ಬೆಂಗಳೂರು: ನೈಸ್ ರಸ್ತೆಯಲ್ಲಿ ಭಾನುವಾರ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕನಕಪುರ ರಸ್ತೆ ಟೋಲ್‌ನಿಂದ ಅಂಜನಾಪುರ ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅಪಘಾತದಿಂದ ನೈಸ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡು ಸುಮಾರು ನಾಲ್ಕು ಕಿಲೋಮೀಟರ್‌ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಹಬ್ಬಕ್ಕೆ ಊರಿಗೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡಿದ್ದಾರೆ. ಸಂಚಾರ ಸುಗಮಗೊಳಿಸಲು ಪೊಲೀಸರು ಎಂ-ಸ್ಯಾಂಡ್ ಲಾರಿ ಚಾಲಕನಿಗೆ ₹50 ಸಾವಿರ ನೀಡಿ, ಮರಳನ್ನು ಚರಂಡಿಗೆ ಸುರಿಸುವ ಮೂಲಕ ತಾತ್ಕಾಲಿಕ ಬದಲಿ ರಸ್ತೆ ನಿರ್ಮಿಸಿದ್ದಾರೆ. ಸಂಚಾರ ತೆರವು ಕಾರ್ಯಾಚರಣೆ ಮುಂದುವರಿದಿದೆ.

Share News

About BigTv News

Check Also

ಕಲಬುರಗಿ: ಶಂಕಿತ ಲಷ್ಕರ್‌ ಉಗ್ರ ವಶ; ಚಿನ್ನದಂಗಡಿಯಲ್ಲಿ ಕೆಲಸ ಮಾಡ್ತಿದ್ದ ಮಲೀಕ್‌!

ಕಲಬುರಗಿ: ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಅಕ್ಕಸಾಲಿಗ ಮಮ್ತಾಜ್‌ವುಲ್ ಮಲೀಕ್‌ನನ್ನು …

Leave a Reply

Your email address will not be published. Required fields are marked *