Breaking News

ಬಾಡಿಗೆ ಕೇಳಿದ್ದಕ್ಕೆ ಮನೆ ಮಾಲೀಕನ ಹಣೆಗೆ ಗುಂಡಿಟ್ಟು ಹತ್ಯೆ​! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ

ಬೆಂಗಳೂರು: ಮೂರು ತಿಂಗಳಿನಿಂದ ಬಾಡಿಗೆ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕ, ವಕೀಲ ಮಂಜುನಾಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವೈಟ್‌ಫೀಲ್ಡ್‌ನ ಪಟ್ಟಂದೂರು ಅಗ್ರಹಾರದಲ್ಲಿ ನಡೆದಿದೆ. ಭಾನುವಾರ ರಾತ್ರಿ 11:30ರ ಸುಮಾರಿಗೆ ಮನೆ ಬಾಗಿಲು ತೆರೆಯುತ್ತಿದ್ದಂತೆ ಇಬ್ಬರು ಬಾಡಿಗೆದಾರರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಣೆಗೆ ಗುಂಡು ತಗುಲಿ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು 50ಕ್ಕೂ ಹೆಚ್ಚು ಮನೆಗಳನ್ನು ಬಾಡಿಗೆಗೆ ನೀಡಿದ್ದರು. ಬಾಡಿಗೆ ಹಣದ ವಿವಾದದ ಜೊತೆಗೆ ಜಮೀನು ವ್ಯಾಜ್ಯವೂ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆಯಿದ್ದು, ವೈಟ್‌ಫೀಲ್ಡ್ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *