Breaking News

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ ಮಾಡಿದ್ದಾರೆ. ಕೇರಳಕ್ಕೆ ಎರಡು ಟ್ರಾಲಿ ಬ್ಯಾಗ್‌ಗಳಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಮಹಮದ್ ರಿಯಾಝ್ ಹಾಗೂ ಕುಮಾರನ್ ಅವರನ್ನು ಬಂಧಿಸಿ ₹20 ಲಕ್ಷ ಮೌಲ್ಯದ ಸಿಗರೇಟ್ ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ₹10 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ ಮಾಡಿ ಮಹಮದ್ ಗುಲ್ಜಾರ್‌ನನ್ನು ಬಂಧಿಸಲಾಗಿದೆ. ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಸಾಲವಾಗಿ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ಇರಿದು ಕೊಲೆಗೆ ಯತ್ನ: ಆರೋಪಿ ಬಂಧನ

ಬಂಟ್ವಾಳ: ಸಾಲವಾಗಿ ನೀಡಿದ್ದ ಹಣ ವಾಪಸ್ ಕೇಳಿದ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಗಾಯಾಳುವನ್ನು …

Leave a Reply

Your email address will not be published. Required fields are marked *