Breaking News

ಮುತ್ತಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಎರಡು ವರ್ಷದ ಮಗು ಸಾವು; ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ರಾಷ್ಟ್ರೀಯ ಹೆದ್ದಾರಿ-50ರ ಕೊಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಮೃತಪಟ್ಟಿದೆ. ಮಸೂತಿ ಗ್ರಾಮದ ರಾವುತ ರವಿ ಹರಿಜನ (2) ಮೃತ ಮಗು. ಅಪಘಾತದಲ್ಲಿ ರೇಣುಕಾ ರವಿ ಹರಿಜನ (36) ಹಾಗೂ ಯಮನವ್ವ ಗಣಪತಿ ಚಲವಾದಿ (40) ಗಂಭೀರವಾಗಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಗಿ ಎನ್‌ಟಿಪಿಸಿ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ತಳವಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಸಾಲವಾಗಿ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ಇರಿದು ಕೊಲೆಗೆ ಯತ್ನ: ಆರೋಪಿ ಬಂಧನ

ಬಂಟ್ವಾಳ: ಸಾಲವಾಗಿ ನೀಡಿದ್ದ ಹಣ ವಾಪಸ್ ಕೇಳಿದ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಗಾಯಾಳುವನ್ನು …

Leave a Reply

Your email address will not be published. Required fields are marked *