ಪುತ್ತೂರು: ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದ ಯುವಕ. ಅಕ್ಟೋಬರ್ 17ರಂದು ರಾತ್ರಿ ಫಾರೂಕ್, ಸೋನು ಹಾಗೂ ಇಷಾನ್ ಎಂಬುವರು ಲಾಡ್ಜ್‌ಗೆ ಬಂದು ರಿಫಾಯಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರಿಫಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸರು ಮೂವರ ವಿರುದ್ಧ ಬಿಎನ್‌ಎಸ್‌ನ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
