ಆನೇಕಲ್: ಪತ್ನಿಯ ಅಕ್ರಮ ಸಂಬಂಧದ ಆರೋಪ ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದು ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮುನಿಕೃಷ್ಣ (35) ಎಂದು ಗುರುತಿಸಲಾಗಿದೆ. ಮುನಿಕೃಷ್ಣ ಅವರಿಗೆ 10 ವರ್ಷಗಳ ಹಿಂದೆ ನಯನಾ ಎಂಬುವರೊಂದಿಗೆ ವಿವಾಹವಾಗಿದ್ದು, ದಂಪತಿಗೆ 6 ವರ್ಷದ ಮಗನಿದ್ದಾನೆ. ಪತ್ನಿಗೆ ಅದೇ ಗ್ರಾಮದ ಕ್ಯಾಬ್ ಚಾಲಕ ಕುಮಾರ್ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರವಾಗಿ ದಂಪತಿ ನಡುವೆ ಮನಸ್ತಾಪ ಉಂಟಾಗಿತ್ತು. ಕುಮಾರ್ ಸಾರ್ವಜನಿಕವಾಗಿ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಮುನಿಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
