Breaking News

ಪೇಂಟ್ ಮಾಡಲು ಬಂದವನ ಜತೆ ಲವ್ವಿಡವ್ವಿ: ಗಂಡನ ಕಥೆ ಮುಗಿಸಲು ಡೀಲ್; ಬಯಲಿಗೆ ಬಂದಿದ್ದೇ ರೋಚಕ

ವಿಜಯಪುರ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಅಪಘಾತದ ರೂಪದಲ್ಲಿ ಕೊಲೆ ಮಾಡಿಸಿರುವ ಆರೋಪದಡಿ ಪತ್ನಿ ಸೇರಿದಂತೆ ನಾಲ್ವರನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ರಾಜಶೇಖರ್ ಕೊಲೆಯಾದ ವ್ಯಕ್ತಿಯಾಗಿದ್ದು, ಪತ್ನಿ ಅಶ್ವಿನಿ ಪ್ರಮುಖ ಆರೋಪಿಯಾಗಿದ್ದಾಳೆ. ಹೊಸ ಮನೆಯ ಪೇಂಟಿಂಗ್ ಕೆಲಸಕ್ಕೆ ಬಂದಿದ್ದ ಆನಂದ್ ಕಲ್ಲೂರನೊಂದಿಗೆ ಅಶ್ವಿನಿಗೆ ಪ್ರೇಮ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಪತಿಯನ್ನು ಮುಗಿಸಲು ಸಂಚು ರೂಪಿಸಿದ್ದ ಆರೋಪಿಗಳು, ರಾಜಶೇಖರ್ ವಾಕಿಂಗ್‌ಗೆ ತೆರಳಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಸ್ಕಾರ್ಪಿಯೋ ವಾಹನದಿಂದ ಡಿಕ್ಕಿ ಹೊಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಪತಿ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಅಶ್ವಿನಿ ದೂರು ನೀಡಿದ್ದಳು. ಆದರೆ ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ರಹಸ್ಯ ಬಯಲಾಗಿದೆ. ಪ್ರಕರಣ ಸಂಬಂಧ ಅಶ್ವಿನಿ, ಆನಂದ್, ಸಚಿನ್ ಬಡಳ್ಳಿ ಹಾಗೂ ಓರ್ವ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ವಕೀಲನ ಹಣೆಗೆ ಗುಂಡಿಕ್ಕಿ ಕೊಂದ ಇಬ್ಬರು ಡೆಲಿವರಿ ಬಾಯ್‌ಗಳು

ಬೆಂಗಳೂರು: ಬಾಡಿಗೆ ಹಣದ ವಿಚಾರವಾಗಿ ಮನೆ ಮಾಲಿಕರಾಗಿದ್ದ ವಕೀಲ ಮಂಜುನಾಥ್ (42) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವೈಟ್‌ಫೀಲ್ಡ್‌ನ …

Leave a Reply

Your email address will not be published. Required fields are marked *