Breaking News

ಎಫ್‌ಐಆರ್ ಮಾಡಿಸಿದ್ದಕ್ಕೆ ಲಾಂಗ್ ಹಿಡಿದು ಮನೆಗೆ ನುಗ್ಗಿದ ರೌಡಿಶೀಟರ್!

ನೆಲಮಂಗಲ: ಗಲಾಟೆ ಸಂಬಂಧ ಎಫ್‌ಐಆರ್ ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ರೌಡಿಶೀಟರ್‌ವೊಬ್ಬ ಲಾಂಗ್ ಹಿಡಿದು ಮನೆಗೆ ನುಗ್ಗಿ ಕುಟುಂಬಕ್ಕೆ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಬೆಟ್ಟಹಳ್ಳಿ ಪಾಳ್ಯದಲ್ಲಿ ನಡೆದಿದೆ. ಯತೀಶ್ ಎಂಬಾತ ಬೈಕ್‌ನಲ್ಲಿ ಬಂದು ರಂಗಣ್ಣ ಎಂಬುವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎನ್ನಲಾಗಿದೆ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಈ ಹಿಂದೆ ಎರಡೂ ಕಡೆಯವರ ನಡುವೆ ಗಲಾಟೆ ನಡೆದಿದ್ದು, ಅಕ್ಟೋಬರ್ 16ರಂದು ನ್ಯಾಯಾಲಯದ ಮೂಲಕ ಎಫ್‌ಐಆರ್ ದಾಖಲಿಸಲು ಅರ್ಜಿ ಸಲ್ಲಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ಯತೀಶ್ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ದೃಶ್ಯಗಳು ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಕೀಲನ ಹಣೆಗೆ ಗುಂಡಿಕ್ಕಿ ಕೊಂದ ಇಬ್ಬರು ಡೆಲಿವರಿ ಬಾಯ್‌ಗಳು

ಬೆಂಗಳೂರು: ಬಾಡಿಗೆ ಹಣದ ವಿಚಾರವಾಗಿ ಮನೆ ಮಾಲಿಕರಾಗಿದ್ದ ವಕೀಲ ಮಂಜುನಾಥ್ (42) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವೈಟ್‌ಫೀಲ್ಡ್‌ನ …

Leave a Reply

Your email address will not be published. Required fields are marked *