ಕೊಪ್ಪಳ: ಮದುವೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಖಾಸಗಿ ಶಾಲಾ ಶಿಕ್ಷಕಿ ಸಂಗೀತ ಮೇಟಿ ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾತರಕಿ ಗ್ರಾಮದ ಸಂಗೀತ ಅ.19ರಂದು ಕೊಪ್ಪಳಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದರು. ಇಂದು ಬೆಳಗ್ಗೆ ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಸುಮಾರು 14 ವರ್ಷಗಳಿಂದ ಸಂಬಂಧಿ ವಿಕಾಸ್‌ನನ್ನು ಪ್ರೀತಿಸುತ್ತಿದ್ದು, ಮದುವೆಗೆ ಆತನ ಸಹೋದರ ವಸಂತ್ ಹಾಗೂ ಪತ್ನಿ ರೇಣುಕಾ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ. ಮೂವರಿಗೂ ಗಲ್ಲು ಶಿಕ್ಷೆಯಾಗಬೇಕೆಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
