ಚನ್ನಪಟ್ಟಣ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಾಯಕಾರಿ ಬೈಕ್ ವೀಲಿಂಗ್ ನಡೆಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದ 9 ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾ ಎಸ್‌ಪಿ ರೋಹನ್ ಜಗದೀಶ್ ಸೂಚನೆಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, 13 ಬೈಕ್‌ಗಳನ್ನು ಜಪ್ತಿ ಮಾಡಿ, ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ 6 ಎಫ್‌ಐಆರ್ ದಾಖಲಿಸಿದ್ದಾರೆ. ಹೆಚ್ಚು ಲೈಕ್ಸ್ ಹಾಗೂ ವೀಕ್ಷಣೆಗಾಗಿ ಯುವಕರು ಅಪಾಯಕಾರಿ ಸ್ಟಂಟ್ ನಡೆಸುತ್ತಿದ್ದರು ಎನ್ನಲಾಗಿದೆ. ಅಪ್ರಾಪ್ತರಿಗೆ ಠಾಣಾ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದ್ದು, ಪೋಷಕರಿಗೂ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
