Breaking News

ವಿವಾಹಿತನ ಕತ್ತು ಸೀಳಿ ಭೀಕರ ಹತ್ಯೆ: ಪತ್ನಿ, ಪ್ರಿಯಕರನ ವಿರುದ್ಧ ದೂರು ದಾಖಲು

ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ರೂಢಗಿ ಗ್ರಾಮದಲ್ಲಿ ಮದುವೆಯಾಗಿ ಆರು ತಿಂಗಳಾಗಿದ್ದ ಗಣೇಶ ಬಸಪ್ಪ ಕೋಲಕಾರ (27) ಎಂಬ ಯುವಕನನ್ನು ಮನೆಯಲ್ಲೇ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಅ.21ರಂದು ಬೆಳಕಿಗೆ ಬಂದಿದೆ. ಪತ್ನಿ ಪೂಜಾ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರಬಹುದು ಎಂದು ಶಂಕಿಸಿ ಮೃತನ ಸಹೋದರಿ ಮುತ್ತಕ್ಕ ಮುದ್ದೇಬಿಹಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ರಮ ಸಂಬಂಧದ ವಿಚಾರವಾಗಿ ದಂಪತಿ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅ.20ರ ರಾತ್ರಿ ಕೂಡ ದಂಪತಿ ನಡುವೆ ಜಗಳ ನಡೆದಿದ್ದು, ಮರುದಿನ ಬೆಳಗ್ಗೆ ಗಣೇಶನ ಶವ ಪತ್ತೆಯಾಗಿದೆ. ಘಟನೆ ಬಳಿಕ ಪತ್ನಿ ಪೂಜಾ ಹಾಗೂ ಆಕೆಯ ಪ್ರಿಯಕರ ಎನ್ನಲಾದ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಕುಚಿಕು ಗೆಳೆಯನನ್ನೇ ಬರ್ಬರವಾಗಿ ಕೊಂದು ಆತನ ಮನೆಯಲ್ಲೇ ಉಪ್ಪಿಟ್ಟು ತಿಂದ ಪಾಪಿ!

ಗದಗ: ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ಕಡಲೆ ಮಾರಾಟದ ಹಣದ ವಿಚಾರವಾಗಿ ಗೆಳೆಯನನ್ನೇ ಕೊಡಲಿಯಿಂದ ಕೊಲೆ ಮಾಡಿದ ಘಟನೆ ಬೆಳಕಿಗೆ …

Leave a Reply

Your email address will not be published. Required fields are marked *