ಕಾಸರಗೋಡು: ತಳಂಗರೆಯ ಕಡವತ್‌ನ ಕಟ್ಟಡವೊಂದರ ಮೇಲಿನ ಕೊಠಡಿಯಲ್ಲಿ ಅಪರಿಚಿತ ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣದ ತನಿಖೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಅಧೀನದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಅ.5ರಂದು ದಾವಣಗೆರೆಯವರು ಎಂದು ಹೇಳಿಕೊಂಡ ನಾಲ್ವರು ಕೊಠಡಿ ಬಾಡಿಗೆಗೆ ಪಡೆದಿದ್ದರು. ಕಳೆದ ಗುರುವಾರ ಕೊಠಡಿಯಲ್ಲಿ ಯುವಕನ ಕೊಳೆತ ಮೃತದೇಹ ಪತ್ತೆಯಾಗಿದ್ದು, ನಾಲ್ವರಲ್ಲಿ ಒಬ್ಬನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಮೂವರು ಬ್ಯಾಗ್‌ಗಳೊಂದಿಗೆ ತೆರಳಿರುವ ಸಿಸಿಟಿವಿ ದೃಶ್ಯ ಪೊಲೀಸರಿಗೆ ಲಭ್ಯವಾಗಿದೆ. ಗೂಗಲ್ ಪೇ ಸಂಖ್ಯೆಯ ಸುಳಿವಿನ ಆಧಾರದಲ್ಲಿ ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

