Breaking News

ಪಿಕಪ್ ವಾಹನದಿಂದ ಡಿಕ್ಕಿ ಹೊಡೆಸಿ ಇಬ್ಬರು ಯುವಕರ ಕೊಲೆ ಕೇಸ್: ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು: ಕೊಣಾಜೆ ಸಮೀಪದ ಬೋಳಿಯಾರ್‌ನಲ್ಲಿ ಸ್ಕೂಟರ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಢಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಾಲಕ ಹಫೀಝ್ ಯಾನೆ ಅಪ್ಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅ.19ರಂದು ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮುಹಮ್ಮದ್ ಅರ್ಫಾಝ್ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಜುನೈದ್ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೂ ಮೃತಪಟ್ಟಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share News

About BigTv News

Check Also

ಕುಚಿಕು ಗೆಳೆಯನನ್ನೇ ಬರ್ಬರವಾಗಿ ಕೊಂದು ಆತನ ಮನೆಯಲ್ಲೇ ಉಪ್ಪಿಟ್ಟು ತಿಂದ ಪಾಪಿ!

ಗದಗ: ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ಕಡಲೆ ಮಾರಾಟದ ಹಣದ ವಿಚಾರವಾಗಿ ಗೆಳೆಯನನ್ನೇ ಕೊಡಲಿಯಿಂದ ಕೊಲೆ ಮಾಡಿದ ಘಟನೆ ಬೆಳಕಿಗೆ …

Leave a Reply

Your email address will not be published. Required fields are marked *