ಗದಗ: ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ಕಡಲೆ ಮಾರಾಟದ ಹಣದ ವಿಚಾರವಾಗಿ ಗೆಳೆಯನನ್ನೇ ಕೊಡಲಿಯಿಂದ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ದ್ಯಾಮಪ್ಪ ಗೊಜನೂರು (62) ಕೊಲೆಯಾದ ವ್ಯಕ್ತಿಯಾಗಿದ್ದು, ಶರಣಪ್ಪ ನರಗುಂದ ಆರೋಪಿ. ದ್ಯಾಮಪ್ಪನಿಗೆ ಸೇರಿದ 45 ಕ್ವಿಂಟಾಲ್ ಕಡಲೆಯನ್ನು ಶರಣಪ್ಪ ಅವರಿಗೆ ತಿಳಿಯದಂತೆ ಮಾರಾಟ ಮಾಡಿ ಹಣ ಖರ್ಚು ಮಾಡಿದ್ದನು. ಹಣ ವಾಪಸ್ ನೀಡುವುದನ್ನು ತಪ್ಪಿಸಲು ಅಕ್ಟೋಬರ್ 8ರಂದು ದ್ಯಾಮಪ್ಪನನ್ನು ಹೊಲಕ್ಕೆ ಕರೆದೊಯ್ದು ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ, ಮೃತದೇಹವನ್ನು ಕೆನಾಲ್ ಪೈಪ್‌ನಲ್ಲಿ ಬಚ್ಚಿಟ್ಟಿದ್ದನು. ನಾಪತ್ತೆ ಪ್ರಕರಣದ ತನಿಖೆ ವೇಳೆ ಪೊಲೀಸರು ಶರಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಕೊಲೆ ಬಳಿಕ ಆರೋಪಿ ಮೃತನ ಮನೆಗೆ ತೆರಳಿ ಕುಟುಂಬಸ್ಥರೊಂದಿಗೆ ಉಪ್ಪಿಟ್ಟು ತಿಂದು ಬಂದಿದ್ದ ಸಂಗತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
