ಹುಬ್ಬಳ್ಳಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟಿರುವ ಘಟನೆ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಭರತ್ ನಗರದ ನಿವಾಸಿ ವಿದ್ಯಾ ಮಂಜುನಾಥ ಗೌಡರ (38) ಎಂದು ಗುರುತಿಸಲಾಗಿದೆ. ಇವರು ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ತೆರಳುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಕಿಮ್ಸ್‌ಗೆ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
