Breaking News

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ: ಜೆಸಿಬಿಯಿಂದ ಅಂಗಡಿ ಧ್ವಂಸಕ್ಕೆ ಯತ್ನ

ತುಮಕೂರು: ಶಿರಾದ ಕೈಗಾರಿಕಾ ಪ್ರದೇಶದಲ್ಲಿ ಚಹಾ ಸಾಲ ನೀಡಲು ನಿರಾಕರಿಸಿದ ಟೀ ಅಂಗಡಿ ಮಾಲೀಕರಿಗೆ ಜೆಸಿಬಿಯಿಂದ ಅಂಗಡಿ ಧ್ವಂಸಗೊಳಿಸುವುದಾಗಿ ಬೆದರಿಕೆ ಹಾಕಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಬಿಹಾರ ಮೂಲದ ಯುವಕರ ಗುಂಪೊಂದು ಚಹಾ ಸಾಲ ನೀಡುವ ವಿಚಾರಕ್ಕೆ ಅಂಗಡಿ ಮಾಲೀಕರೊಂದಿಗೆ ಜಗಳವಾಡಿದ್ದು, ಜೆಸಿಬಿ ತಂದು ಅಂಗಡಿ ನೆಲಸಮಗೊಳಿಸುವುದಾಗಿ ಬೆದರಿಕೆ ಒಡ್ಡಿದೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಅಂಗಡಿ ಮಾಲೀಕರ ನೆರವಿಗೆ ಧಾವಿಸಿದ್ದಾರೆ. ಈ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *