Breaking News

ಟ್ರ್ಯಾಕ್ಟರ್ ಗೆ ದಾರಿ ಬಿಡದ ವಿಚಾರಕ್ಕೆ ಗಲಾಟೆ,ದೊಣ್ಣೆಯಿಂದ ಹೊಡೆದು ಹಲ್ಲೆ

ಚಿಕ್ಕಮಗಳೂರು: ತಾಲೂಕಿನ ಸಗನೀಪುರ ಗ್ರಾಮದಲ್ಲಿ ಟ್ರ್ಯಾಕ್ಟರ್‌ಗೆ ದಾರಿ ಬಿಡದ ವಿಚಾರಕ್ಕೆ ವ್ಯಕ್ತಿಯೊಬ್ಬರ ಮೇಲೆ ಮರದ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ತಿಂಗಳ ಹಿಂದೆ ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುವಾಗ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಮದನ್ ಎಂಬವರ ಮೇಲೆ ಮಲ್ಲೇಶ, ಮಂಜು ಹಾಗೂ ಮತ್ತೋರ್ವ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮದನ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *