Breaking News

ಅಮಾಯಕರಿಗೆ ಕಳ್ಳರ ಪಟ್ಟ ಕಟ್ಟಿ ಥಳಿತ – ಮಾರಣಾಂತಿಕ ಹಲ್ಲೆ!

ಬೆಂಗಳೂರು: ವಾಹನ ಅಡ್ಡ ಬಂದ ವಿಚಾರಕ್ಕೆ ರಸ್ತೆಯಲ್ಲಿ ಜಗಳವಾಡುತ್ತಿದ್ದ ಇಬ್ಬರು ಯುವಕರನ್ನು ಕಳ್ಳರೆಂದು ಭಾವಿಸಿ ಸ್ಥಳೀಯರು ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಾಹಿದ್ ಹಾಗೂ ಫರ್ದೀನ್ ಪಾಷಾ ಹಲ್ಲೆಗೊಳಗಾದ ಯುವಕರು. ಇಬ್ಬರ ನಡುವೆ ಗಲಾಟೆ ನಡೆಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ‘ಕಳ್ಳರು ಬಂದಿದ್ದಾರೆ’ ಎಂದು ಕೂಗಿದ್ದಾನೆ. ಇದನ್ನು ನಂಬಿದ ಸ್ಥಳೀಯರು ಯುವಕರನ್ನು ಬೆನ್ನಟ್ಟಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಶಾಹಿದ್ ತಲೆ ಹಾಗೂ ಮೈಕೈಗೆ ಗಾಯಗಳಾಗಿದ್ದು, ಮೊಬೈಲ್ ಕೂಡ ಜಖಂಗೊಂಡಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶಾಹಿದ್ ನೀಡಿದ ದೂರಿನ ಮೇರೆಗೆ ಪೊಲೀಸರು 10 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Share News

About BigTv News

Check Also

ನಾಗರಬಾವಿ ರಿಂಗ್ ರೋಡ್ ವಕೀಲನ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಾರ್ಟ್ ಅಟ್ಯಾಕ್ ಅಲ್ಲ, ಅದು ಭೀಕರ ಕೊಲೆ

ಬೆಂಗಳೂರು: ಆಟೋ ಬಾಡಿಗೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ವಕೀಲ ಶ್ರೀರಾಮ್ ಕೊಲೆಯಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *