Breaking News

ನೆಪಕ್ಕೆ ರ‍್ಯಾಪಿಡೋ ರೈಡರ್ ಆದರೆ ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ವ್ಯಕ್ತಿ ಎಟಿಎಸ್ ಬಲೆಗೆ

ಮುಂಬೈ: ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ ಹಾಗೂ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಪ್ರಚೋದಿಸುವ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ 33 ವರ್ಷದ ಮೊಹಮ್ಮದ್ ಹಸನ್ ಅಖ್ತರ್‌ನನ್ನು ಮಹಾರಾಷ್ಟ್ರ ಎಟಿಎಸ್ ಬಂಧಿಸಿದೆ. ಆರೋಪಿ ರ‍್ಯಾಪಿಡೋ ಚಾಲಕ ಹಾಗೂ ಅತ್ತರ್ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದು, ಪಾಕಿಸ್ತಾನ ಬೆಂಬಲಿತ ಟೆಲಿಗ್ರಾಂ ಚಾನೆಲ್‌ಗಳ ಮೂಲಕ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ. ಆತನ ಮೊಬೈಲ್ ವಶಪಡಿಸಿಕೊಂಡಿರುವ ಅಧಿಕಾರಿಗಳು 39ಕ್ಕೂ ಹೆಚ್ಚು ಆಕ್ಷೇಪಾರ್ಹ ಪೋಸ್ಟ್‌ಗಳ ಸ್ಕ್ರೀನ್‌ಶಾಟ್ ಸಂಗ್ರಹಿಸಿದ್ದಾರೆ. ಧಾರ್ಮಿಕ ದ್ವೇಷ ಹರಡಿದ ಆರೋಪದಡಿ ಬಿಎನ್‌ಎಸ್ ಸೆಕ್ಷನ್ 196(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 14ರಿಂದ ಆರೋಪಿ ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸಕ್ರಿಯನಾಗಿರಲಿಲ್ಲ ಎಂದು ರ‍್ಯಾಪಿಡೋ ಸ್ಪಷ್ಟಪಡಿಸಿದ್ದು, ಆತನ ಇತರ ಉಗ್ರ ಸಂಪರ್ಕಗಳ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ನಾಗರಬಾವಿ ರಿಂಗ್ ರೋಡ್ ವಕೀಲನ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಾರ್ಟ್ ಅಟ್ಯಾಕ್ ಅಲ್ಲ, ಅದು ಭೀಕರ ಕೊಲೆ

ಬೆಂಗಳೂರು: ಆಟೋ ಬಾಡಿಗೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ವಕೀಲ ಶ್ರೀರಾಮ್ ಕೊಲೆಯಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *