Breaking News

ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಓರ್ವ ಆರೋಪಿ ಅರೆಸ್ಟ್

ಉಡುಪಿ: ಜಿಲ್ಲೆಯ ಉದ್ಯಮಿಗಳು ಹಾಗೂ ಗಣ್ಯರಿಗೆ ಕೋಟ್ಯಂತರ ರೂ. ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್ ಅಮೀನ್ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ಹೇಮಂತ್ ಪೂಜಾರಿಯ ಸೂಚನೆಯಂತೆ ಉದ್ಯಮಿಗಳ ಮೊಬೈಲ್ ಸಂಖ್ಯೆ ಹಾಗೂ ವೈಯಕ್ತಿಕ ಮಾಹಿತಿ ಸಂಗ್ರಹಿಸಿ ನೀಡುತ್ತಿದ್ದ ಆರೋಪ ಸುರೇಶ್ ಮೇಲಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ 8 ಪ್ರಕರಣಗಳು ದಾಖಲಾಗಿವೆ. ಹಣ ನೀಡದ ಉದ್ಯಮಿಯೊಬ್ಬರ ಹತ್ಯೆಗೆ ಸಂಚು ರೂಪಿಸಲು ಹೇಮಂತ್ ಪೂಜಾರಿ ₹5 ಲಕ್ಷ ಕಳುಹಿಸಿದ್ದ ಎನ್ನಲಾಗಿದೆ. ಈ ಪೈಕಿ ₹4.13 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ನಾಗರಬಾವಿ ರಿಂಗ್ ರೋಡ್ ವಕೀಲನ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಾರ್ಟ್ ಅಟ್ಯಾಕ್ ಅಲ್ಲ, ಅದು ಭೀಕರ ಕೊಲೆ

ಬೆಂಗಳೂರು: ಆಟೋ ಬಾಡಿಗೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ವಕೀಲ ಶ್ರೀರಾಮ್ ಕೊಲೆಯಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Leave a Reply

Your email address will not be published. Required fields are marked *