ಬಂಟ್ವಾಳ: ಕಾವಳಪಡೂರು ಗ್ರಾಮದ ವಗ್ಗದ ಸರಕಾರಿ ವಸತಿಗೃಹದಲ್ಲಿ ಹಾವೇರಿ ಜಿಲ್ಲಾಸ್ಪತ್ರೆಯ ಶುಶ್ರೂಷಾಧಿಕಾರಿ ಸುನೀತಾ ಮಹಾದೇವ್ ದೇಸಂಗಿ (34) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪತಿ ಸಂಜೀವಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ವೇತನದ ಹಣದ ವಿಚಾರವಾಗಿ ಪತಿ ನಿರಂತರ ಕಿರುಕುಳ ನೀಡುತ್ತಿದ್ದು, ಹಲ್ಲೆ ನಡೆಸುತ್ತಿರುವುದಾಗಿ ಅ.22ರಂದು ಸುನೀತಾ ತನ್ನ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದರು ಎನ್ನಲಾಗಿದೆ. ಮರುದಿನ ಮುಂಜಾನೆ ಮಂಚದಿಂದ ಬಿದ್ದು ಪ್ರಜ್ಞೆ ತಪ್ಪಿರುವುದಾಗಿ ಪತಿ ತಿಳಿಸಿದ್ದು, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸುನೀತಾ ಮೃತಪಟ್ಟಿದ್ದರು. ಮೃತದೇಹದ ಹಣೆ, ಕುತ್ತಿಗೆ ಹಾಗೂ ತಲೆಯಲ್ಲಿ ಗಾಯಗಳಿದ್ದು, ಮೂಗು ಮತ್ತು ಬಾಯಿಯಿಂದ ರಕ್ತ ಬಂದಿರುವುದು ಕಂಡುಬಂದಿದೆ. ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿ ಸಹೋದರ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
