Breaking News

ಮಕ್ಕಳ ಎದುರಲ್ಲೇ ಚಾಕುವಿನಿಂದ ಪತ್ನಿ ಹತ್ಯೆಗೈದ ಪತಿ ಪೊಲೀಸ್ ವಶಕ್ಕೆ

ಕೋಲಾರ: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಪತಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಶ್ರೀನಿವಾಸಪುರ ಟೋಲ್ ಗೇಟ್ ಬಳಿ ನಡೆದಿದೆ. ನಂದಂಬಳ್ಳಿಯ ಸ್ನೇಹಾ (22) ಮೃತ ಮಹಿಳೆ. ಸ್ನೇಹಾ ಅವರು ಪತಿ ರಾಮಚಂದ್ರ ಹಾಗೂ ಮಕ್ಕಳೊಂದಿಗೆ ಮೂರಾಂಡಹಳ್ಳಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪತ್ನಿಯ ಶೀಲದ ವಿಚಾರವಾಗಿ ದಂಪತಿ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿ ರಾಮಚಂದ್ರನನ್ನು ಗಲ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ನೆಪಕ್ಕೆ ರ‍್ಯಾಪಿಡೋ ರೈಡರ್ ಆದರೆ ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ವ್ಯಕ್ತಿ ಎಟಿಎಸ್ ಬಲೆಗೆ

ಮುಂಬೈ: ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ ಹಾಗೂ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಪ್ರಚೋದಿಸುವ ಪೋಸ್ಟ್‌ಗಳನ್ನು …

Leave a Reply

Your email address will not be published. Required fields are marked *