Breaking News

ಕೋಲಾರದಲ್ಲಿ ಮೂವರು ಮಕ್ಕಳ ಎದುರಲ್ಲೇ ಚಾಕುವಿನಿಂದ ಇರಿದು ಪತ್ನಿ ಹತ್ಯೆ : ಆರೋಪಿ ಪತಿ ಅರೆಸ್ಟ್!

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಟೋಲ್ ಗೇಟ್ ಸಮೀಪ ಮೂವರು ಮಕ್ಕಳ ಎದುರೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಂದಂಬಳ್ಳಿಯ ಸ್ನೇಹಾ (26) ಕೊಲೆಯಾದ ಮಹಿಳೆ. ಪತ್ನಿಯ ಶೀಲದ ಬಗ್ಗೆ ಅನುಮಾನ ಹೊಂದಿದ್ದ ಪತಿ ರಾಮಚಂದ್ರ, ಪದೇಪದೇ ಜಗಳವಾಡುತ್ತಿದ್ದ ಎನ್ನಲಾಗಿದೆ. ಮೂರಂಡಹಳ್ಳಿಯ ಮನೆಗೆ ತೆರಳುತ್ತಿದ್ದ ವೇಳೆ ಮಕ್ಕಳ ಎದುರೇ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ರಾಮಚಂದ್ರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲೂ ಬೈಕ್ ಸವಾರನ ಕುತ್ತಿಗೆ ಸೀಳಿದ ಮಾರಕ ಮಾಂಜಾ ದಾರ

ಬೆಂಗಳೂರು: ನಿಷೇಧಿತ ಚೈನೀಸ್ ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರರೊಬ್ಬರ ಕುತ್ತಿಗೆ ಭೀಕರವಾಗಿ ಸೀಳಿರುವ ಘಟನೆ ಹೆಗಡೆನಗರದ ಫ್ಲೈ ಓವರ್ …

Leave a Reply

Your email address will not be published. Required fields are marked *