ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜಲಾಲುದ್ದೀನ್, ಸೈದುಲಾ ಇಸ್ಲಾಂ ಹಾಗೂ ಅಹ್ಮದ್ ಬಂಧಿತ ಆರೋಪಿಗಳು. ಆರೋಪಿ ಜಲಾಲುದ್ದೀನ್ ಮದುವೆಯನ್ನು ಅಲ್ಲಾವುದ್ದೀನ್ ಮುರಿಸಿದ್ದರಿಂದ ಇಬ್ಬರ ನಡುವೆ ವೈಯಕ್ತಿಕ ದ್ವೇಷ ಬೆಳೆದಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಬಾಂಬ್ ತಯಾರಿಸಿ ಬೆಂಗಳೂರಿಗೆ ತಂದು ಸ್ಫೋಟ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ ಅಲ್ಲಾವುದ್ದೀನ್ ಅದೃಷ್ಟವಶಾತ್ ಪಾರಾಗಿದ್ದಾನೆ. ಪ್ರಕರಣದ ತನಿಖೆಗೆ 10ಕ್ಕೂ ಹೆಚ್ಚು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, 1,500 ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ, ನೂರಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
