ಮೈಸೂರು: ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಕಾಲೇಜಿಗೆ ಕರೆಸಿಕೊಂಡು ಗುಂಪೊಂದು ಹಿಗ್ಗಾಮುಗ್ಗ ಹಲ್ಲೆ ನಡೆಸಿರುವ ಘಟನೆ ಮಾನಸ ಗಂಗೋತ್ರಿ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗಿದೆ. ಯುವತಿ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ವೇಳೆ ಆತನ ಬೈಕ್ ಅನ್ನು ಕೂಡ ಬೀಳಿಸಲಾಗಿದೆ. ಇದನ್ನು ಪ್ರಶ್ನಿಸಿದ ಮತ್ತೊಬ್ಬ ಯುವಕನ ಮೇಲೂ ಗುಂಪು ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಕರಣ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದ್ದು, ಘಟನೆ ಕುರಿತು ತನಿಖೆ ನಡೆಯಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

