Breaking News

ಬೆಂಗಳೂರು: ಭೀಕರ ಅಗ್ನಿ ಅವಘಡ; 23 ಸಿಲಿಂಡರ್ ಸ್ಫೋಟ

ಬೆಂಗಳೂರು: ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಗೊಂಡನಹಳ್ಳಿಯ ವಾಣಿಜ್ಯ ಮಳಿಗೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬರೋಬ್ಬರಿ 23 ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಳಿಗೆಯಲ್ಲಿ ಸಿಲಿಂಡರ್‌ಗಳ ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಕೂಡ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ದಟ್ಟ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಒಂದೇ ಮಳಿಗೆಯಲ್ಲಿ ಸಿಲಿಂಡರ್, ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟಕ್ಕೆ ಅನುಮತಿ ಇತ್ತೇ ಎಂಬ ಕುರಿತು ಗಂಗಮ್ಮನಗುಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ಮೂವರು ಮಕ್ಕಳ ಎದುರಲ್ಲೇ ಚಾಕುವಿನಿಂದ ಇರಿದು ಪತ್ನಿ ಹತ್ಯೆ : ಆರೋಪಿ ಪತಿ ಅರೆಸ್ಟ್!

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಟೋಲ್ ಗೇಟ್ ಸಮೀಪ ಮೂವರು ಮಕ್ಕಳ ಎದುರೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ …

Leave a Reply

Your email address will not be published. Required fields are marked *