ವಿಜಯಪುರ: ಮದುವೆಯಾದ ಕೇವಲ ಐದು ತಿಂಗಳಿಗೆ ಹಳೆ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರೂಡಗಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಗಣೇಶ್ ಕೋಲಕಾರ್ (23) ಎಂದು ಗುರುತಿಸಲಾಗಿದೆ. ಗಣೇಶ್ ಪತ್ನಿ ಅಕ್ಷತಾ ಅಲಿಯಾಸ್ ಪೂಜಾ (19) ಮದುವೆಯ ನಂತರವೂ ತನ್ನ ಅಪ್ರಾಪ್ತ ಪ್ರಿಯಕರನೊಂದಿಗೆ ಸಂಪರ್ಕದಲ್ಲಿದ್ದಳು. ಈ ವಿಚಾರವಾಗಿ ದಂಪತಿ ನಡುವೆ ನಿತ್ಯ ಜಗಳ ನಡೆಯುತ್ತಿತ್ತು. ಅಕ್ಟೋಬರ್ 21ರ ತಡರಾತ್ರಿ ಪ್ರಿಯಕರನನ್ನು ಮನೆಗೆ ಕರೆಸಿಕೊಂಡ ಪೂಜಾ, ನಿದ್ರೆಯಲ್ಲಿದ್ದ ಪತಿಯ ಕುತ್ತಿಗೆಯನ್ನು ಕುಡುಗೋಲಿನಿಂದ ಕೊಯ್ದು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಲೆ ಬಳಿಕ ಪರಾರಿಯಾಗಿದ್ದ ಪೂಜಾ ಹಾಗೂ ಆಕೆಯ ಅಪ್ರಾಪ್ತ ಪ್ರಿಯಕರನನ್ನು ಪೊಲೀಸರು 24 ಗಂಟೆಯೊಳಗೆ ಮಹಾರಾಷ್ಟ್ರ ಗಡಿಭಾಗದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಸ್ಥಳ ಮಹಜರಿಗೆ ಆರೋಪಿಯನ್ನು ಗ್ರಾಮಕ್ಕೆ ಕರೆತಂದಾಗ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
