Breaking News

ಡೆಲಿವರಿ ವಿಚಾರಕ್ಕೆ ಕಿರಿಕ್‌ , ಲಾಂಗು ಮಚ್ಚು ಎತ್ತಿಕೊಂಡು ಬಂದ ಮಹಿಳೆಯರು – ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ!

ಆನೇಕಲ್: ಬೆಂಗಳೂರು ಹೊರವಲಯದ ಲಿಂಗಾಪುರದಲ್ಲಿ ಫ್ಲಿಪ್‌ಕಾರ್ಟ್ ಡೆಲಿವರಿ ವಿಚಾರವಾಗಿ ನಡೆದ ಕ್ಷುಲ್ಲಕ ಜಗಳ ಮಾರಣಾಂತಿಕ ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಕೀರ್ತಿ ಹಾಗೂ ಸತ್ಯ ನಡುವಿನ ಗಲಾಟೆ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ಮಂದಿಯ ಗುಂಪು ರಾತ್ರಿ ಕೀರ್ತಿ ಮನೆಗೆ ನುಗ್ಗಿ ದಾಳಿ ನಡೆಸಿದೆ. ಲಾಂಗು, ಮಚ್ಚು ಹಾಗೂ ದೊಣ್ಣೆಗಳೊಂದಿಗೆ ಬಂದ ದುಷ್ಕರ್ಮಿಗಳು ಮನೆಯ ಕಿಟಕಿ, ಬಾಗಿಲುಗಳನ್ನು ಧ್ವಂಸಗೊಳಿಸಿ, ಕೀರ್ತಿಯನ್ನು ಹೊರಗೆ ಎಳೆತಂದು ಹಲ್ಲೆ ನಡೆಸಿದ್ದಾರೆ. ರಕ್ಷಣೆಗೆ ಬಂದ ಅಣ್ಣ ಮಧು ಮೇಲೆಯೂ ಹಲ್ಲೆ ನಡೆಸಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮದನ್, ಲೋಕೇಶ್, ನಾಗಭೂಷಣ, ಸತ್ಯ ಸೇರಿದಂತೆ 11ಕ್ಕೂ ಹೆಚ್ಚು ಮಂದಿಯ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಭೀಕರ ಅಗ್ನಿ ಅವಘಡ; 23 ಸಿಲಿಂಡರ್ ಸ್ಫೋಟ

ಬೆಂಗಳೂರು: ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಗೊಂಡನಹಳ್ಳಿಯ ವಾಣಿಜ್ಯ ಮಳಿಗೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬರೋಬ್ಬರಿ 23 ಸಿಲಿಂಡರ್‌ಗಳು …

Leave a Reply

Your email address will not be published. Required fields are marked *