Breaking News

ವಿಧಾನ ಪರಿಷತ್ ಚುನಾವಣೆಯಲ್ಲಿ ನಕಲಿ ಮತದಾನ ಆರೋಪ: ಶಿಕ್ಷಕ ಅಮಾನತು, ಮಹಿಳೆ ವಿರುದ್ಧ ದೂರು

ಹಾವೇರಿ: ಪದವೀಧರ ಪಶ್ಚಿಮ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ನಕಲಿ ಮತದಾನ ನಡೆದ ಆರೋಪದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪಕ್ಕಾಗಿ ಶಿಕ್ಷಕ ವಿ.ಜಿ. ಮಲ್ಲೂರು ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಮತಗಟ್ಟೆ ಸಂಖ್ಯೆ 85ರಲ್ಲಿ ಬಸವೇಶ್ವರ ನಗರದ ಆಶಾ ಪಾಟೀಲ ಅವರ ಹೆಸರಿನಲ್ಲಿ ಶಿವಾಜಿನಗರದ ಶಿಲ್ಪಾ ಬಡಮ್ಮನವರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. ಮತದಾರರ ಗುರುತಿನ ಚೀಟಿಯಲ್ಲಿನ ಫೋಟೋ ಸರಿಯಾಗಿ ಪರಿಶೀಲಿಸದೆ ಮತಪತ್ರ ನೀಡಲು ಸೂಚಿಸಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಅವರ ವರದಿ ಆಧರಿಸಿ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ನಕಲಿ ಮತದಾನದ ಆರೋಪ ಎದುರಿಸುತ್ತಿರುವ ಶಿಲ್ಪಾ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಬಾಕಿಯಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *