ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಟ್ಟಡದ ಭದ್ರತಾ ಸಿಬ್ಬಂದಿಯಾಗಿದ್ದ ತನ್ನ ಚಿಕ್ಕಪ್ಪ ಅಲ್ಲಾವುದ್ದೀನ್ ಅವರನ್ನು ಕೊಲೆ ಮಾಡಲು ಜಲಾಲ್ ಸಂಚು ರೂಪಿಸಿದ್ದ ಎನ್ನಲಾಗಿದೆ. ಬಾಂಬ್ ಇರಿಸಿದ್ದ ಬ್ಯಾಗ್ ಅನ್ನು ಚಿಕ್ಕಪ್ಪನಿಗೆ ತಂದುಕೊಟ್ಟಿದ್ದ ಎಂದು ಆರೋಪಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದ್ದು, ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿತ್ತು. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
