Breaking News

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ಕೆಲಕಾಲ ವಕೀಲರೊಂದಿಗೆ ಮಾತುಕತೆ ನಡೆಸಿ, ಬಳಿಕ ಏಕಾಏಕಿ ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ವೆಂಕಟರಮಣಪ್ಪ ಅವರನ್ನು ಗೌರಿಬಿದನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಯ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *