ಮಣಿಪಾಲ: ಗರುಡ ಗ್ಯಾಂಗ್ ಮೇಲೆ ದಾಳಿ ನಡೆಸಲು ಮಾರಕಾಸ್ತ್ರಗಳೊಂದಿಗೆ ಸಂಚು ರೂಪಿಸುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಅ.24ರಂದು ವಿದ್ಯಾರತ್ನ ನಗರ ಸಮೀಪ ಬಂಧಿಸಿದ್ದಾರೆ. ಕಿನ್ನಿಮುಲ್ಕಿಯ ಪರ್ವೇಝ್ (26) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯಿಂದ ಕಬ್ಬಿಣದ ಲಾಂಗ್ ಹಾಗೂ ಚಾಕು ವಶಪಡಿಸಿಕೊಂಡಿದ್ದಾರೆ. ಗರುಡ ಗ್ಯಾಂಗ್‌ನ ದಾವೂದ್, ಇಸಾಕ್ ಸೇರಿದಂತೆ ಕೆಲವರ ಮೇಲಿನ ವೈಮನಸ್ಸಿನಿಂದ ದಾಳಿಗೆ ಸಂಚು ರೂಪಿಸಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಸಂಬಂಧಿತ ಪ್ರಕರಣಗಳು ದಾಖಲಾಗಿವೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
