Breaking News

ಸುರತ್ಕಲ್‌ನಲ್ಲಿ ಠಾಣೆ ಎದುರು ಹೈಡ್ರಾಮಾ; ಯುವಕನ ಶವವನ್ನಿಟ್ಟು ಪೊಲೀಸ್ ಠಾಣೆ ಎದುರು ಪ್ರತಿಭಟನೆ, ಶಾಸಕ ಭರತ್ ಶೆಟ್ಟಿ ಭೇಟಿ!

ಮಂಗಳೂರು: ಯುವ ಜೋಡಿಗೆ ಕಿರುಕುಳ ನೀಡಿದ ಆರೋಪದಡಿ ಪೊಲೀಸ್ ವಿಚಾರಣೆ ಎದುರಿಸುತ್ತಿದ್ದ ಹೊಸಬೆಟ್ಟು ನಿವಾಸಿ ಸೋಮನಾಥ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಪೊಲೀಸರ ದೌರ್ಜನ್ಯ ಹಾಗೂ ಸುಳ್ಳು ದೂರಿನಿಂದಲೇ ಸೋಮನಾಥ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಎದುರಿಟ್ಟು ಬೃಹತ್ ಪ್ರತಿಭಟನೆ ನಡೆಸಿದರು. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿ ಪ್ರತಿಭಟನಾಕಾರರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸೂಕ್ತ ತನಿಖೆ ಮತ್ತು ಕಾನೂನು ಕ್ರಮದ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *