ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.15ರಂದು ವಿದ್ಯಾರ್ಥಿಗಳನ್ನು ಹೊಟೇಲ್‌ನ ಕೊಠಡಿಯಲ್ಲಿ ಕೂಡಿ ಹಾಕಿ ಬಲವಂತವಾಗಿ ಹಾಡು ಹಾಡಿಸಿ, ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಇತರರಿಗೆ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ರಾಗಿಂಗ್ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೈಕಾಲು ಮುರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿ ಅಕ್ಷಯ ವಿ.ಎಸ್. ದೂರು ನೀಡಿದ್ದಾರೆ. ಆರೋಪಿಗಳಾದ ಅಶಬ್, ಅಸ್ಫಕ್ ಹಾಗೂ ಇತರರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
