Breaking News

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸರ್ವೆ ನಂ.35ರ ಅರಣ್ಯ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ಕೆ ಮುಂದಾದ ವೇಳೆ ಚಲಪತಿ ಎಂಬಾತ ಅಡ್ಡಿಪಡಿಸಿ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಸಿಬ್ಬಂದಿಗಳಾದ ಸೋಮಶೇಖರ್, ಜಮೀರ್ ಹಾಗೂ ನವೀನ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಚಲಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಅರಣ್ಯ ಇಲಾಖೆ ಒತ್ತುವರಿ ತೆರವು ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಜಂಟಿ ಸರ್ವೆ ನಡೆಸುವವರೆಗೆ ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಆಗ್ರಹಿಸಿವೆ.

Share News

About BigTv News

Check Also

ಹೆಲ್ತ್ ಇನ್ಶೂರೆನ್ಸ್‌ ಪ್ರೀಮಿಯಂ ಪಾವತಿ ನೆಪ : ಮಹಿಳೆಗೆ 2.68 ಲಕ್ಷ ರೂ. ವಂಚನೆ

ಮಂಗಳೂರು: ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಕಟ್ಟುವ ನೆಪದಲ್ಲಿ 42 ವರ್ಷದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ₹2.68 ಲಕ್ಷ ವಂಚಿಸಿರುವ ಘಟನೆ …

Leave a Reply

Your email address will not be published. Required fields are marked *