Breaking News

ಪ್ಯಾಂಟ್ ಜೇಬಿನಲ್ಲಿ ₹1.30 ಕೋಟಿ ಮೌಲ್ಯದ ಚಿನ್ನ ಸಾಗಿಸುತ್ತಿದ್ದ ಯುವಕನ ಬಂಧನ

ದೇವನಹಳ್ಳಿ: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ಟೋಬರ್ 25ರಂದು ದುಬೈನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ, ಪ್ಯಾಂಟ್ ಜೇಬಿನಲ್ಲಿ ಬಚ್ಚಿಟ್ಟಿದ್ದ 900 ಗ್ರಾಂ ತೂಕದ ₹1.30 ಕೋಟಿ ಮೌಲ್ಯದ ಚಿನ್ನದ ಸರಗಳು ಪತ್ತೆಯಾಗಿವೆ. ಚಿನ್ನವನ್ನು ವಶಪಡಿಸಿಕೊಂಡ ಅಧಿಕಾರಿಗಳು ಕಸ್ಟಮ್ಸ್ ಕಾಯ್ದೆ-1962ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಚಿನ್ನದ ಮೂಲ ಹಾಗೂ ಅಕ್ರಮ ಸಾಗಣೆಯ ಉದ್ದೇಶದ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಹೆಲ್ತ್ ಇನ್ಶೂರೆನ್ಸ್‌ ಪ್ರೀಮಿಯಂ ಪಾವತಿ ನೆಪ : ಮಹಿಳೆಗೆ 2.68 ಲಕ್ಷ ರೂ. ವಂಚನೆ

ಮಂಗಳೂರು: ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಕಟ್ಟುವ ನೆಪದಲ್ಲಿ 42 ವರ್ಷದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ₹2.68 ಲಕ್ಷ ವಂಚಿಸಿರುವ ಘಟನೆ …

Leave a Reply

Your email address will not be published. Required fields are marked *