Breaking News

ಶಾಲೆಗೆ ತೆರಳುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯ ಅಪಹರಣ; ಬಾಗಲಕೋಟೆ ಮೂಲದ ಆರೋಪಿ ಬಂಧನ

ಬಾಗಲಕೋಟೆ: ಶಾಲೆಗೆ ತೆರಳುತ್ತಿದ್ದ ಪರಿಶಿಷ್ಟ ಜಾತಿಯ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾರಿನಲ್ಲಿ ಅಪಹರಿಸಿದ ಆರೋಪದಡಿ ಬಾಗಲಕೋಟೆ ಮೂಲದ ಗೂಡಾಸಾಬ್ ಯಾನೆ ಆಶಿಫ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಶಾಲೆಗೆ ಬಾರದಿರುವ ಬಗ್ಗೆ ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು, ಮಂಗಳವಾರ ರಾತ್ರಿಯೇ ಸೋಮೇಶ್ವರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯ ಹೇಳಿಕೆ ಆಧರಿಸಿ ಆರೋಪಿ ವಿರುದ್ಧ ಪೋಕ್ಸೊ, ಅಪಹರಣ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *