ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ. ಆರೋಪಿ ಸುರೇಶ್ ಆಚಾರ್ಯ ಮಾರಕಾಯುಧ ಹಾಗೂ ಆಸಿಡ್‌ನೊಂದಿಗೆ ಅಂಗಡಿಗೆ ನುಗ್ಗಿ ಮಾಲಕ ನವೀನ್ ಕುಮಾರ್ ಮೇಲೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ನವೀನ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಠೇವಣಿ ಹಣದ ವಿವಾದವೇ ದಾಳಿಗೆ ಕಾರಣ ಎನ್ನಲಾಗಿದ್ದು, ಪೊಲೀಸರು ಆರೋಪಿ ಸುರೇಶ್ ಆಚಾರ್ಯನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
