Breaking News

ಶ್ರೀನಿವಾಸಪುರ: ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ

ಶ್ರೀನಿವಾಸಪುರ: ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ಮಜರ ಮಲ್ಲಂಪಲ್ಲಿಯಲ್ಲಿ ಅರಣ್ಯ ಪ್ರದೇಶದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾಗೂ ಸ್ಥಳೀಯರ ನಡುವೆ ಘರ್ಷಣೆ ನಡೆದಿದೆ. ಮೂವರು ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ಡಿಆರ್‌ಎಫ್‌ಒ ನವೀನ್, ವಾಚರ್ ಸೋಮಶೇಖರ್ ಹಾಗೂ ಗಾರ್ಡ್ ಜಮೀರ್ ಅವರನ್ನು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆ ವೇಳೆ ವಾಹನಗಳನ್ನೂ ಜಖಂಗೊಳಿಸಲಾಗಿದೆ ಎಂದು ಡಿಸಿಎಫ್ ಸರೀನಾ ಸಿಕ್ಕಲಿಗಾರ್ ಆರೋಪಿಸಿದ್ದಾರೆ. ಹಲ್ಲೆ ನಡೆಯುತ್ತಿದ್ದರೂ ಪೊಲೀಸರು ರಕ್ಷಣೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿಸಿಎಫ್ ದೂರಿದ್ದಾರೆ. ಮತ್ತೊಂದೆಡೆ, ಅರಣ್ಯ ಇಲಾಖೆ ಬಡ ಹಾಗೂ ದಲಿತ ರೈತರ ಸಾಗುವಳಿ ಜಮೀನಿನಲ್ಲಿ ಬೆಳೆ ನಾಶಪಡಿಸಿದೆ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *