ಹಿರಿಯೂರು: ಕಲ್ಪವೃಕ್ಷ ಗ್ರಾಮೀಣಾಭಿವೃದ್ಧಿ ಸಹಕಾರಿ ಸಂಘದ ಹೆಸರಿನಲ್ಲಿ ನೂರಾರು ಜನರಿಂದ ಉಳಿತಾಯ ಹಾಗೂ ಪಿಗ್ಮಿ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿಬಂದಿದೆ. ಸಂಘದ ಕಾರ್ಯದರ್ಶಿ ತಮ್ಮಿಂದ ₹35 ಲಕ್ಷ ಪಡೆದು ಮರಳಿಸಿಲ್ಲ. ಭಾನುಪ್ರಕಾಶ್ ಎಂಬುವವರಿಂದಲೂ ₹20 ಲಕ್ಷ ಪಡೆದು ವಂಚಿಸಿದ್ದಾರೆ ಎಂದು ಜಿ. ದೇವರಾಜ್ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನೂ 12 ಮಂದಿ ವಂಚನೆಗೆ ಒಳಗಾಗಿದ್ದು, ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಗರ ಠಾಣೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
