Breaking News

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ ನಾಗರತ್ನ (42) ಹಾಗೂ ಹೇಮಂತ್ (41) ಎಂಬವರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿ ಆಪ್ ಮೂಲಕ ಪರಿಚಯವಾದ ನಾಗರತ್ನಳ ಮದುವೆ ಪ್ರಸ್ತಾಪವನ್ನು ಪ್ರದೀಪ್ ನಿರಾಕರಿಸಿದ್ದರು. ಬಳಿಕ ತನ್ನ ಕಷ್ಟಗಳನ್ನು ಹೇಳಿಕೊಂಡು 2024ರ ಜನವರಿಯಿಂದ 2026ರ ಜನವರಿವರೆಗೆ ಹಂತ ಹಂತವಾಗಿ ಹಣ ಪಡೆದಿದ್ದಾಳೆ. ಹಣ ವಾಪಸ್ ಕೇಳಿದಾಗ ಅಕ್ರಮ ಸಂಬಂಧದ ಸುಳ್ಳು ಪ್ರಕರಣ ದಾಖಲಿಸಿ ಮಾನಹಾನಿ ಮಾಡುವುದಾಗಿ ಬೆದರಿಸಿದ್ದಾಳೆ ಎಂದು ದೂರಲಾಗಿದೆ. ಪ್ರದೀಪ್ ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಹಿರಿಯೂರು | ಹಣ ಸಂಗ್ರಹಿಸಿ ವಂಚನೆ; ಕಾರ್ಯದರ್ಶಿ ವಿರುದ್ಧ ದೂರು ದಾಖಲು

ಹಿರಿಯೂರು: ಕಲ್ಪವೃಕ್ಷ ಗ್ರಾಮೀಣಾಭಿವೃದ್ಧಿ ಸಹಕಾರಿ ಸಂಘದ ಹೆಸರಿನಲ್ಲಿ ನೂರಾರು ಜನರಿಂದ ಉಳಿತಾಯ ಹಾಗೂ ಪಿಗ್ಮಿ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ …

Leave a Reply

Your email address will not be published. Required fields are marked *