ಬೆಂಗಳೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಬಾಲಕರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದಲ್ಲಿ 16 ವರ್ಷದ ಬಾಲಕನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಸಂದ್ರದಲ್ಲಿ ಅ.21ರಂದು ಘಟನೆ ನಡೆದಿದೆ. ಒಂದು ತಿಂಗಳ ಹಿಂದೆ ನಡೆದ ಸಣ್ಣ ಗಲಾಟೆಯ ದ್ವೇಷದಿಂದ ಆರೋಪಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾನೆ. ಜಗಳ ಬಿಡಿಸಲು ಬಂದ ಸ್ನೇಹಿತನಿಗೂ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಇಬ್ಬರು ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಸ್ಥಿರವಾಗಿದೆ. ಆರೋಪಿಯನ್ನು ಬಾಲಾಪರಾಧಿಗಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
