ಬೆಂಗಳೂರು: ಸ್ನೇಹಿತನ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಮಹೇಂದ್ರ ಹಾಗೂ ಆತನ ಸ್ನೇಹಿತ ತರುಣ್‌ನನ್ನು ಅಪಹರಿಸಿದ ಪ್ರಕರಣದಲ್ಲಿ ಸಂತ್ರಸ್ತ ಯುವತಿ ಸೇರಿದಂತೆ 11 ಮಂದಿಯನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರದ ವಿಷಯ ತಿಳಿದ ಬಳಿಕ ಯುವತಿ ಹಾಗೂ ಆಕೆಯ ಸ್ನೇಹಿತರು ಸೇರಿ ಅ.28ರಂದು ಇಬ್ಬರನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿದ್ದಾರೆ. ಬಳಿಕ ಮಹೇಂದ್ರನ ತಂದೆಗೆ ಕರೆ ಮಾಡಿ ₹10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ದೂರು ದಾಖಲಾದ ಆರು ಗಂಟೆಯೊಳಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಗರಭಾವಿಯ ಮನೆಯೊಂದರಿಂದ ಅಪಹೃತ ಇಬ್ಬರನ್ನು ರಕ್ಷಿಸಿ 11 ಮಂದಿಯನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತಿಬ್ಬರಿಗಾಗಿ ಶೋಧ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
