Breaking News

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ ಕೊಲೆಗೆ ಸಂಚು ರೂಪಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ಸ್ನೇಹಿತರು ಸೇರಿ ಮಹೇಂದ್ರ ಮತ್ತು ತರುಣ್ ಅವರನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿದ್ದಾರೆ. ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದು, ಒಬ್ಬನನ್ನು ಕೊಲೆ ಮಾಡಿ ಮತ್ತೊಬ್ಬನಿಂದ ಡೆತ್‌ನೋಟ್ ಬರೆಸಿ ಆತ್ಮಹತ್ಯೆಯಂತೆ ಬಿಂಬಿಸಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ತಾಂತ್ರಿಕ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ನಾಗರಭಾವಿಯ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ರಕ್ಷಿಸಿ, ಯುವತಿ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲೂ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಹಿರಿಯೂರು | ಹಣ ಸಂಗ್ರಹಿಸಿ ವಂಚನೆ; ಕಾರ್ಯದರ್ಶಿ ವಿರುದ್ಧ ದೂರು ದಾಖಲು

ಹಿರಿಯೂರು: ಕಲ್ಪವೃಕ್ಷ ಗ್ರಾಮೀಣಾಭಿವೃದ್ಧಿ ಸಹಕಾರಿ ಸಂಘದ ಹೆಸರಿನಲ್ಲಿ ನೂರಾರು ಜನರಿಂದ ಉಳಿತಾಯ ಹಾಗೂ ಪಿಗ್ಮಿ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ …

Leave a Reply

Your email address will not be published. Required fields are marked *