Breaking News

ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ, ಓರ್ವನಿಗೆ ಮೂರು ವರ್ಷ ಶಿಕ್ಷೆ

ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ರಾಕೇಶ್ (26) ಎಂಬ ಯುವಕನನ್ನು ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರಿಗೆ ಜೀವಾವಧಿ ಶಿಕ್ಷೆ ಹಾಗೂ ಓರ್ವನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2019ರ ಜನವರಿ 2ರಂದು ಸುನೀಲ್ ಕುಮಾರ್ ತನ್ನ ಸ್ನೇಹಿತರಾದ ಪ್ರವೀಣ್, ಪ್ರೀತಮ್ ಹಾಗೂ ರೋಹಿತ್ ಜೊತೆ ಸೇರಿ ರಾಕೇಶ್ ಹತ್ಯೆಗೆ ಸಂಚು ರೂಪಿಸಿದ್ದ. ಬಳಿಕ ತಲವಾರಿನಿಂದ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸುನೀಲ್, ಪ್ರವೀಣ್ ಹಾಗೂ ಪ್ರೀತಮ್‌ಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹15 ಸಾವಿರ ದಂಡ ವಿಧಿಸಿದೆ. ರೋಹಿತ್‌ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ದಂಡದ ಮೊತ್ತದಲ್ಲಿ ₹50 ಸಾವಿರವನ್ನು ಮೃತ ರಾಕೇಶ್ ತಂದೆಗೆ ನೀಡುವಂತೆ ಆದೇಶಿಸಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *