ಮಂಗಳೂರು: ದಾವಣಗೆರೆಯಿಂದ ₹1.15 ಕೋಟಿ ಹಣದೊಂದಿಗೆ ಮಂಗಳೂರಿಗೆ ಬಂದಿದ್ದ ಸತ್ಯನಾರಾಯಣ ಎಂಬವರನ್ನು ಅಪಹರಿಸಿ, ಹಣ ಹಾಗೂ ಎರಡು ಮೊಬೈಲ್‌ಗಳನ್ನು ದರೋಡೆ ಮಾಡಿರುವ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.28ರಂದು ಬೆಳಿಗ್ಗೆ ಲಾಲ್‌ಬಾಗ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಮುಖಕ್ಕೆ ಮುಸುಕು ಧರಿಸಿದ್ದ ನಾಲ್ವರು ಕಪ್ಪು ಕಾರಿನಲ್ಲಿ ಸತ್ಯನಾರಾಯಣ ಅವರನ್ನು ಅಪಹರಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನಗರದಲ್ಲಿ ಸುತ್ತಾಡಿಸಿ, ಅವರ ಬಳಿಯಿದ್ದ ಹಣದ ಬ್ಯಾಗ್‌ಗಳು ಹಾಗೂ ಮೊಬೈಲ್‌ಗಳನ್ನು ಕಸಿದುಕೊಂಡಿದ್ದಾರೆ. ಬಳಿಕ ಕಾವೂರು ಬಸ್‌ನಿಲ್ದಾಣದ ಸಮೀಪದ ಗುಡ್ಡದ ಬಳಿ ಇಳಿಸಿ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
