ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆ ವಿವಿಧ ಸಾಲದ ಆಯಪ್‌ಗಳಿಂದ ₹2 ಲಕ್ಷ ಸಾಲ ಪಡೆದು, ಬಡ್ಡಿ ಸೇರಿ ₹2.15 ಲಕ್ಷ ಮರುಪಾವತಿಸಿದ್ದರು. ಸಾಲ ತೀರಿಸಿದ ಬಳಿಕವೂ ವಂಚಕರು ಆಕೆಯ ಖಾತೆಗೆ ₹5 ಸಾವಿರ, ₹10 ಸಾವಿರ ಹಾಗೂ ₹30 ಸಾವಿರ ವರ್ಗಾಯಿಸಿ, ಬಡ್ಡಿ ಸಮೇತ ಹಣ ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ. ಹಣ ನೀಡದಿದ್ದರೆ ಫೋಟೋಗಳನ್ನು ಅಶ್ಲೀಲವಾಗಿ ತಿದ್ದಿ ಕುಟುಂಬಸ್ಥರಿಗೆ ಕಳುಹಿಸುವುದಾಗಿ ಬೆದರಿಸಿದ್ದಾರೆ. ಇದರಿಂದ ಹೆದರಿದ ಮಹಿಳೆ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹2.90 ಲಕ್ಷ ವರ್ಗಾಯಿಸಿದ್ದಾರೆ. ಈ ಕುರಿತು ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

