Breaking News

ಮಂಗಳೂರು: ಬಸ್‌ನಿಂದ ಇಳಿದ ತಕ್ಷಣವೇ ಸಿನಿಮಾ ಶೈಲಿಯಲ್ಲಿ ಕಿಡ್ನಾಪ್; ವ್ಯಕ್ತಿಯ ಕೈಯಲ್ಲಿದ್ದ ₹1.15 ಕೋಟಿ ಹಣ ದರೋಡೆ!

ಮಂಗಳೂರು: ದಾವಣಗೆರೆಯಿಂದ ₹1.15 ಕೋಟಿ ನಗದು ಹಣದೊಂದಿಗೆ ಮಂಗಳೂರಿಗೆ ಬಂದಿದ್ದ ಸತ್ಯನಾರಾಯಣ ಎಂಬವರನ್ನು ಕಾರಿನಲ್ಲಿ ಅಪಹರಿಸಿ, ಹಣ ಹಾಗೂ ಎರಡು ಮೊಬೈಲ್‌ಗಳನ್ನು ದರೋಡೆ ಮಾಡಿರುವ ಘಟನೆ ನಡೆದಿದೆ. ಅ.28ರಂದು ಬೆಳಿಗ್ಗೆ ಲಾಲ್‌ಬಾಗ್‌ನ ರಾಮಕೃಷ್ಣ ಹಾಸ್ಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಕಪ್ಪು ಕಾರಿನಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಅವರನ್ನು ಬಲವಂತವಾಗಿ ಅಪಹರಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನಗರದಲ್ಲಿ ಸುತ್ತಾಡಿಸಿ, ಹಣವಿದ್ದ ಎರಡು ಬ್ಯಾಗ್‌ಗಳನ್ನು ಕಸಿದುಕೊಂಡಿದ್ದಾರೆ. ಬಳಿಕ ಕಾವೂರು ಬಳಿಯ ನಿರ್ಜನ ಪ್ರದೇಶದಲ್ಲಿ ಸತ್ಯನಾರಾಯಣ ಅವರನ್ನು ಇಳಿಸಿ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಸಿ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *